ಬೆಂಗಳೂರು: ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು.
ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರೋ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಕಾಮೆಂಟ್ಸ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನ ಬಂಧಿಸಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕಮಿಷನರ್ ಕಚೇರಿ ಬಳಿ ಮಾತನಾಡಿದ ಅವರು, 11 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆದರೆ ಬಂಧಿತರು ಯಾರ ಅಭಿಮಾನಿ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದ್ದಾರೆ. ರಮ್ಯಾ ದೂರಿನನ್ವಯ ಸಿಸಿಬಿಯವರು ಹಲವರನ್ನ ಗುರುತಿಸಿದ್ದಾರೆ. ಕೆಲವರ ಸ್ಪಷ್ಟ ಮಾಹಿತಿ ಸಿಕ್ಕಿದೆ,
ಇಬ್ಬರನ್ನ ಅರೆಸ್ಟ್ ಮಾಡಿದ್ದೇವೆ. ಇನ್ನೂ ಹನ್ನೊಂದು ಜನರ ಮಾಹಿತಿ ಸಿಕ್ಕಿದ್ದು ತನಿಖೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದ ಕಾಮೆಂಟ್‌ಗಳನ್ನೂ ವೆರಿಫೈ ಮಾಡಿದ್ದೇವೆ. 13 ಜನರ ಪೈಕಿ ಇಬ್ಬರನ್ನ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.