ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಹಾಗೂ ಸುರತ್ಕಲ್ ಪ್ರದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್ನಲ್ಲಿ 4 ಕಡೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಹಲವರ ಮನೆಗಳು ಹಾಗೂ ಕಚೇರಿಗಳ ದಾಖಲೆ ಪರಿಶೀಲನೆ ನಡೆಸಿದ್ದು, ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12 ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್ಐಎ ಹೆಗಲಿಗೆ ನೀಡಿತ್ತು.
ಜೂನ್ 1ರಂದು ರಾತ್ರಿ 8.30ಕ್ಕೆ ಮಂಗಳೂರು ಹೊರವಲಯದ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತು. ಈ ಘಟನೆಯಿಂದ ಕರಾವಳಿ ಕೆಂಡವಾಗಿತ್ತು.