ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ನೀರಿನ ಮಟ್ಟ ದಿಢೀರ್ ಏರಿಕೆ – ಕುಸಿತಗೊಂಡ ಡ್ಯಾಂ!

0
Spread the love

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ ಆಗಿದ್ದು, ಡ್ಯಾಂ ಕುಸಿತಗೊಂಡಿದೆ.

Advertisement

ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಅಣೆಕಟ್ಟು ಕುಸಿದಿದೆ. ಡ್ಯಾಂ ಕುಸಿಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಡ್ಯಾಂ ಕುಸಿತದಿಂದ ಕೆಳಗಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಕ್ರೇನ್, ಟ್ರಕ್, ರಾಕ್ ಬ್ರೇಕರ್ ಮತ್ತು ಕಾರು ಸೇರಿದಂತೆ ಅಣೆಕಟ್ಟು ಬಳಿ ಇದ್ದ ಭಾರೀ ಯಂತ್ರೋಪಕರಣಗಳು ಕೊಚ್ಚಿ ಹೋಗಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ನಿರಂತರ ಮಳೆಯಿಂದಾಗಿ ಭುಂತರ್ ಬಳಿ ಬಿಯಾಸ್ ನದಿಯೊಂದಿಗೆ ವಿಲೀನಗೊಳ್ಳುವ ಪಾರ್ವತಿ ನದಿಯ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ. ಇದರಿಂದ ಆನೆಕಟ್ಟಿಗೆ ಬರುವ ಒಳಹರಿವು ಹೆಚ್ಚಾಗಿ, ಡ್ಯಾಂ ಕುಸಿದಿದೆ.

ಪರಿಣಾಮ ಈ ಮಾರ್ಗದಲ್ಲಿ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.


Spread the love

LEAVE A REPLY

Please enter your comment!
Please enter your name here