ಬೆಂಗಳೂರು:- ಕೆ ಆರ್ ನಗರದಲ್ಲಿ ತಮ್ಮ ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.
ಐಪಿಸಿ ಸೆಕ್ಷನ್ 376 (2) (K), 376 (2) (N) ಅಡಿಯಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಲ್ಲದೇ 5 ಲಕ್ಷ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತೆಗೂ 7 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಇಂದಿನಿಂದಲೇ ರೇಪಿಸ್ಟ್ ಪ್ರಜ್ವಲ್ಗೆ ಜೀವನಪರ್ಯಂತ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.