‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಜನಮನ ಗೆದ್ದಿದ್ದ ನಟ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆಗೆ ಶರಣಾಗಿಯಾದ್ದಾರೆ. ಯಲ್ಲಾಪುರದ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚಂದ್ರಶೇಖರ್ ಸಿದ್ಧಿ ಮೃತದೇಹ ಪತ್ತೆ ಆಗಿದೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ.
ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಘಳಿಸಿದ್ದ ಚಂದ್ರ ಶೇಖರ್ ಸಿದ್ಧಿ ಕೆಲ ಧಾರವಾಹಿಗಳಲ್ಲೂ ನಟಿಸಿದ್ದರು. ಜೀವನ ನಿರ್ವಹಣೆಗಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅಂತೆಯೇ ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದ ಸಿದ್ಧಿ ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದಾರೆ. ಆ ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.
ಆತನ ಪತ್ನಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಚಂದ್ರಶೇಖರ್ ತಾಯಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.