ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಬೇಕು ಎಂದು ರೋಟರಿ ಕ್ಲಬ್‌ನ ಅಧ್ಯಕ್ಷ ಚೇತನ ಅಂಗಡಿ ಹೇಳಿದರು.

Advertisement

ಇತ್ತೀಚೆಗೆ ನಗರದ ತೋಂಟದ ಸಿದ್ಧೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಕೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಬೆಳವಣಿಗೆ ಯಾಗುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಬರುತ್ತದೆ ಎಂದರು.

ಆಡಳಿತ ಮಂಡಳಿಯ ಸದಸ್ಯ ಅಮರೇಶ ಅಂಗಡಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಅತಿಥಿಗಳಾಗಿ ಆಗಮಿಸಿದ್ದ ಮಹಾರಾಣಾ ಪ್ರತಾಪಸಿಂಹ ಕಾಲೇಜಿನ ದೈಹಿಕ ಉಪನ್ಯಾಸಕ ಶರಣಬಸವ ಚೆಗರಡ್ಡಿ, ಜ.ತೋಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಾಯ್.ಎಸ್. ಮತ್ತೂರ ಮಾತನಾಡಿದರು.

ದೈಹಿಕ ಶಿಕ್ಷಕರಾದ ಎಫ್.ಆರ್. ದೊಡ್ಡಣ್ಣವರ, ವೀರೇಶ ಸೂಡಿ, ಕಾಲೇಜಿನ ಕ್ರೀಡಾ ಕಾರ್ಯಾಧ್ಯಕ್ಷ ಕೆ.ಎಸ್. ಮಲ್ಲಾಪೂರ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ವಿಜಯಕುಮಾರ ಹೊನ್ನಳ್ಳಿ, ಪ್ರೀತಿ ಈರಾಳ, ಫರ್ಜ ಮುಳಗುಂದ ಭಾಗವಹಿಸಿದ್ದರು. ಪ್ರತಿಭಾ ನಾಯ್ಕಲ್ ಹಾಗೂ ಸಂಗಡಿಗರು ವಚನ ಪ್ರಾರ್ಥನೆ ಹಾಡಿದರು. ಉಪನ್ಯಾಸಕರಾದ ವಿಜಯಲಕ್ಷ್ಮೀ ಕೊಣ್ಣೂರ ಸ್ವಾಗತಿಸಿದರು. ಪ್ರತಿಭಾ ಆರ್ ನಿರೂಪಿಸಿದರು. ಪ್ರತಿಭಾ ಪಟ್ಟೇದ ವಂದಿಸಿದರು.


Spread the love

LEAVE A REPLY

Please enter your comment!
Please enter your name here