ಬೆಂಗಳೂರು: Forgive Me ಎಂದು ಡೆತ್ ನೋಟ್ ಬರೆದಿಟ್ಟು 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟುವಿನಲ್ಲಿ ನಡೆದಿದೆ. ಗಂಧಾರ್(13) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದು, ಬಾಲಕ ರಾತ್ರಿ ಊಟ ಮಾಡಿ ಸಹಜವಾಗಿಯೇ ರೂಮ್‌ನಲ್ಲಿ ಮಲಗಿದ್ದಾನೆ.
Advertisement
ಬೆಳಗ್ಗೆ ತಂದೆ ರೂಮ್ ಬಾಗಿಲು ತೆರೆದಾಗ ಆತ್ಮಹತ್ಯೆ ಶರಣಾಗಿರೋದು ಕಂಡುಬಂದಿದೆ. Forgive Me ಅಂತ ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ತಂದೆ ಗಣೇಶ್ ಪ್ರಸಾದ್ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.