ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು ಕಳೆದ ವಾರ ಅವಹೇಳನ ಮಾಡಿದರು. ಈಗ ಮಹದೇವಪ್ಪ ಮುಂದುವರೆಸಿದ್ದಾರೆ ಎಂದರು.
Advertisement
ಟಿಪ್ಪು ಸುಲ್ತಾನ್ ದಸರಾ ಶುರು ಮಾಡಿದ ಅಂತನೂ ಹೇಳಿ ಬಿಡಿ. ಫೇಕ್ ನ್ಯೂಸ್ ಹರಡಿದವರ ಮೇಲೆ ಕೇಸ್ ಹಾಕೋಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲು ಈ ಕಾಯ್ದೆ ತರಲಿ.
ಮೊದಲ ಕೇಸ್ ಮಹದೇವಪ್ಪ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್, ಯತೀಂದ್ರ ಮೇಲೆಯೆ ಹಾಕಿಸಿ. ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.