ನವದೆಹಲಿ:- ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಚೈನ್‌ನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
Advertisement
ಸಂಸದೆ ಸುಧಾ ಅವರು ಚಾಣಕ್ಯಪುರಿಯ ಪೋಲೆಂಡ್ ರಾಯಭಾರ ಕಚೇರಿಯ ಬಳಿ ಡಿಎಂಕೆ ಶಾಸಕಿ ರಾಜತಿ ಅವರ ಜೊತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವನ್ನು ಸಹ ಬರೆದಿದ್ದಾರೆ. ಪತ್ರದಲ್ಲಿ ಬೆಳಿಗ್ಗೆ 6:15 ರಿಂದ 6:20 ರ ಸುಮಾರಿಗೆ ಪೋಲೆಂಡ್ ರಾಯಭಾರ ಕಚೇರಿಯ ಗೇಟ್ -3 ಮತ್ತು ಗೇಟ್ -4 ರ ಬಳಿ ನಡೆದುಕೊಂಡು ಹೋಗುತ್ತಿದ್ದೆವು. ಈ ವೇಳೆ, ಸ್ಕೂಟರ್‌ನಲ್ಲಿ ಹೆಲ್ಮೆಟ್ ಧರಿಸಿದ ವ್ಯಕ್ತಿ ತಮ್ಮ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಉಲ್ಲೇಖಿಸಿದ್ದಾರೆ.