ಬೆಂಗಳೂರು: ಕಾಂಗ್ರೆಸ್ ಪಕ್ಷದವರು ದೇಶದ್ರೋಹಿಗಳು ಎಂದರೆ ತಪ್ಪಾಗಲಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೇಶದ್ರೋಹಿಗಳು ಎಂದರೆ ತಪ್ಪಾಗಲಾರದು.
Advertisement
ಕೇವಲ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಸಮಾಜದ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ದೇಶ- ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಕೆಲಸ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ದೇಶದ್ರೋಹಿಗಳಿಗೆ ಕರ್ನಾಟಕ ಸ್ವರ್ಗವಾದರೆ, ರಾಹುಲ್ ಅವರಿಗೆ ಕರ್ನಾಟಕ ಎಂದರೆ ಬಹಳ ಪ್ರೀತಿ. ಇದು ಇಲ್ಲಿನ ಜನತೆಯ ಮೇಲಲ್ಲ; ದೆಹಲಿಗೆ ಎಲ್ಲ ರೀತಿ ವ್ಯವಸ್ಥೆ ತಲುಪುತ್ತಿದೆ ಎಂಬುದೇ ಇದಕ್ಕೆ ಕಾರಣ ಎಂದು ವಿವರಿಸಿದರು. ಅಪಪ್ರಚಾರಕ್ಕಾಗಿ ನಾಳೆ ಮತ್ತೆ ಬರುತ್ತಾರೆ. ಬಿಜೆಪಿ ಕೂಡ ಇದಕ್ಕೆ ಪ್ರತ್ಯುತ್ತರ ಕೊಡಲು ಸಜ್ಜಾಗಿದೆ ಎಂದಿದ್ದಾರೆ.