ಕೃಷ್ಣ ಜಯಂತಿ: ಪೂರ್ವಭಾವಿ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಶ್ರೀ ಕೃಷ್ಣ ಜಯಂತಿ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ಶಾಲೆಗಳಲ್ಲಿಯೂ ಸಹ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು ಎಂದರು.

ಜಯAತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ನಗರದ ಜೋಡು ಮಾರುತಿ ದೇವಸ್ಥಾನದಿಂದ ಶ್ರೀ ಕೃಷ್ಣ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಕಲಾ ತಂಡಗಳು, ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ, ಸಮಾಜದ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಲಾಗುವುದು. ಪ್ರಚಾರಕ್ಕಾಗಿ ನಗರದ ವಿವಿಧೆಡೆ ಬ್ಯಾನರ್ ಅಳವಡಿಸಲಾಗುವುದು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸಲಾಗುವುದು. ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ವಹಿಸಲಾಗುವುದು ಎಂದು ಸಭೆಗೆ ವಿವರಿಸಿದರು.

ಸಭೆಯಲ್ಲಿ ಕಲಾ ತಂಡಗಳ ಆಯ್ಕೆ, ಜಯಂತಿ ನಿಮಿತ್ತ ಮೆರವಣಿಗೆ, ವೇದಿಕೆ ಕಾರ್ಯಕ್ರಮ, ಆಮಂತ್ರಣ ಪತ್ರಿಕೆ ಮುದ್ರಣ, ಉಪನ್ಯಾಸಕರ ಆಯ್ಕೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಮುದಾಯದ ಹರೀಶ ಪೂಜಾರ, ಸಮುದಾಯದ ಮುಖ್ಯಸ್ಥರು, ಹಿರಿಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here