ಚಿತ್ರದುರ್ಗ:- ಎರಡು ಬಸ್‍ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ಇಲ್ಲಿನ ಬಸ್ ನಿಲ್ದಾಣ ಬಳಿ ಜರುಗಿದೆ.
Advertisement
ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋಗೆ ಹಿಂಭಾಗದಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿ ಮುಂದೆ ತೆರಳುತ್ತಿದ್ದ ಸಾರಿಗೆ ಬಸ್‍ಗೆ ಅಪ್ಪಳಿಸಿದೆ. ಇದರಿಂದ ಎರಡು ಬಸ್‍ಗಳ ನಡುವೆ ಆಟೋ ಸಿಲುಕಿದೆ. ಪರಿಣಾಮ ಆಟೋ ಚಾಲಕ ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.