ಕೋಲಾರ: ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸರ್ಕಾರಕ್ಕೆ ಜೊತೆ ಸಭೆ ಮೇಲೆ ಸಭೆ ನಡೆದ್ರೂ ಅವರ ಬೇಡಿಕೆ ಈಡೇರಿಸಿಕಲ್ಲ. ಹೀಗಾಗಿ ಇಂದು ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮಧ್ಯೆ ಬಸ್ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಿದೆ.
Advertisement
ಇನ್ನೂ ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.