ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಇಂದಿನ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು, ಅದರ ಸದುಪಯೋಗ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆದು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.

Advertisement

ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸಮೀಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

ಪ್ರಾಚಾರ್ಯ ಪ್ರಕಾಶ್ ಮತನಾಡಿ, ತಂತ್ರಜ್ಞಾನ ಬೆಳೆದಂತೆ ದೇಶದಲ್ಲಿ ನೂತನ ಆವಿಷ್ಕಾರಗಳು ಹೆಚ್ಚುತ್ತಿವೆ. ಕೇವಲ ಸರ್ಕಾರಿ ಉದ್ಯೋಗಗಳನ್ನು ಪಡೆಯುವತ್ತ ವಿದ್ಯಾರ್ಥಿಗಳು ಗಮನ ನೀಡಬಾರದು. ಶಿಕ್ಷಣ ಪಡೆದ ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಕಷ್ಟ. ಹಾಗಾಗಿ ತಾಂತ್ರಿಕ ಶಿಕ್ಷಣ ಪಡೆದವರು ಪ್ರತಿಷ್ಠಿತ ಕಂಪನಿಗಳಲ್ಲಿ ತಮ್ಮ ಪ್ರತಿಭೆಗೆ ಅನುಸಾರ ಉದ್ಯೋಗ ಹೊಂದಿ ಎಂದರು.

ಈ ವೇಳೆ ಕಾಲೇಜಿನ ವಿಭಾಗಾಧಿಕಾರಿ ಗುರುಬಸವರಾಜ್, ನವೀನ್ ಕುಮಾರ್, ಸಿ. ಬಸವರಾಜ್, ಜ್ಯೋತಿಶ್ರೀ, ಇಸ್ಮಾಯಿಲ್ ಸೇರಿದಂತೆ ಉಪನ್ಯಾಸಕರು, ಕಾಲೇಜಿನ ಸಿಬ್ಬಂದಿ ವರ್ಗದವರು ಇದ್ದರು.


Spread the love

LEAVE A REPLY

Please enter your comment!
Please enter your name here