ಕೊಡಗು: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಡಗು ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ.
ವಿಜಯಪುರದಲ್ಲೂ ಭಾರೀ ಮಳೆ!
ಇನ್ನೂ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ.