ಕಾರವಾರ-ಇಳಕಲ್ ರಾ.ಹೆ ಮೇಲ್ದರ್ಜೆಗೇರಿಸಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

Advertisement

ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಲಕ್ಷ್ಮೇಶ್ವರ, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಯೋಜನೆಯ ಡಿಪಿಆರ್ ಸಹ ಸಲ್ಲಿಕೆಯಾಗಿದ್ದು, ಭೂಸ್ವಾಧೀನಕ್ಕೆ ನಿರ್ಧರಿಸಲಾಗಿದೆ.

ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ, ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಹಲವು ವರ್ಷದಿಂದ ಈ ರಸ್ತೆಯಲ್ಲಿ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ.

ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ. ಈ ರಸ್ತೆಗೆ ಸಂಪರ್ಕ ಕಲ್ಪಿಸುವ ಇತರೇ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆಯೂ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here