ತುಮಕೂರು:- ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿ ಗ್ರಾಮ ಹೊರವಲಯದಲ್ಲಿ ಕತ್ತರಿಸಿದ ರೀತಿಯಲ್ಲಿ ಎರಡು ಕೈಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿ ಆಗಿದೆ.
Advertisement
ಕಪ್ಪು ಕವರ್ ನಲ್ಲಿ ಕವರ್ ಗಳನ್ನು ಸುತ್ತಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಚಿಂಪುಗಾನಹಳ್ಳಿ ಹೊರವಲಯದ ಮುತ್ಯಾಲಮ್ಮ ದೇವಾಲಯದ ಬಳಿ ಒಂದು ಕೈ ಪತ್ತೆಯಾದ್ರೆ, ಆ ಜಾಗದಿಂದ ಸುಮಾರು 1 ಕಿ.ಮೀ ದೂರದಲ್ಲಿ ಮತ್ತೊಂದು ಕೈ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಶಾಕ್ ಆಗಿದ್ದಾರೆ.
ಕೊಲೆ ಮಾಡಿ ಕೈ ಕತ್ತರಿಸಿ ಇಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದು, ತನಿಖೆ ಮುಂದುವರಿಸಿದ್ದಾರೆ.