ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ: ರಾಹುಲ್ ಗಾಂಧಿ ಪ್ರತಿಭಟನೆಗೆ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್!

0
Spread the love

ಬೆಂಗಳೂರು:- 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಅವರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ.

Advertisement

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ಮಾಡಿದ್ದಾರೆ.

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here