ಬೆಂಗಳೂರು: “ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ” ಪ್ರತಿಭಟನೆಗಾಗಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು,ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.
Advertisement
ದೆಹಲಿಯಿಂದ ಬೆಂಗಳೂರು HAL ಏರ್ ಪೋರ್ಟ್ ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಪಕ್ಷದ ಶಾಲು ಹೊದೆಸಿ ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ನಡೆಸಲಿದೆ. ಈ ಸಮಾವೇಶಕ್ಕೆ ವೋಟ್ ಅಧಿಕಾರ್ ರ್ಯಾಲಿ ಎಂದು ಹೆಸರಿಸಲಾಗಿದೆ.