ಶಿವಮೊಗ್ಗ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಎಲ್ಲರಿಗೂ ಗೊತ್ತಿದೆ ಮತಗಳ್ಳತನದ ಹಿನ್ನೆಲೆ ಕಾಂಗ್ರೆಸ್‌ಗೆ ಬಹಳ ಹಿಂದಿನಿಂದಲೂ ಇದೆ. ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಇದು ನಡೆದಿದ್ದು, ರಾಹುಲ್ ಗಾಂಧಿ ಅವರ ಅಜ್ಜಿಯೇ ಮತಗಳ್ಳತನದಿಂದ ಆಗ ಗೆದ್ದಿದ್ದರು ಎಂದರು. ಇನ್ನೂ.ರಾಯಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಗಾಂಧಿ ಮತಗಳ್ಳತನದಿಂದ ಗೆದ್ದಿದ್ದರು.
ಅಲಹಾಬಾದ್ ಹೈಕೋರ್ಟ್ ಅವರ ವಿರುದ್ಧ ತೀರ್ಪು ಕೊಟ್ಟಿತ್ತು. ಇಂದಿರಾಗಾಂಧಿಯವರ ಮೆಂಬರ್ಶಿಪ್ ಕ್ಯಾನ್ಸಲ್ ಮಾಡಿತ್ತು. ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ದರು.ಅಲಹಾಬಾದ್ ಕೋರ್ಟ್ ತೀರ್ಪನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು ಎಂದು ಹೇಳಿದ್ದಾರೆ.
ನಿಮ್ಮ ಅಜ್ಜಿ ಗೆದ್ದಿದ್ದು ಮತಗಳ್ಳತನದಿಂದ 50 ವರ್ಷವಾದ್ದರಿಂದ ದೇಶದ ಜನರಿಗೂ ಮರೆತು ಹೋಗಿದೆ ಎಂದು ರಾಹುಲ್ ಗಾಂಧಿ ಭಾವಿಸಿದ್ದಾರೆ ಎಂದರು. ಇನ್ನೂ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋಕೆ ನಾಚಿಕೆ ಆಗಬೇಕು. ತಕ್ಷಣ ಆಕ್ಷೇಪ ಸಲ್ಲಿಸಲು ಅವಕಾಶವಿತ್ತು. ಆದ್ರೆ ಆಗ ಯಾರು ತಕರಾರು ಮಾಡಿಲ್ಲ. ಈ ಬಂದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.