ಬೆಂಗಳೂರು: ದೇಶದ ವಿವಿಧ ಸಂಸ್ಥೆಗಳ ದುರ್ಬಳಕೆಯಿಂದ ಸಂವಿಧಾನ ಮುಗಿಸುವ ಕೆಲಸ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತಾಡಿದ ಅವರು, ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿದೆ. ದೇಶದ ವಿವಿಧ ಸಂಸ್ಥೆಗಳ ದುರ್ಬಳಕೆಯಿಂದ ಸಂವಿಧಾನ ಮುಗಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಗಾಂಧಿ, ನೆಹರು, ಅಂಬೇಡ್ಕರ್ ಅವರ ಧ್ವನಿಯಿದೆ. ಬಸವಣ್ಣ, ಸಾವಿತ್ರಿ ಬಾಯಿ ಪುಲೆ ಅವರ ಸಾಮಾಜಿಕ ಚಳವಳಿಯ ಹೆಜ್ಜೆಗುರುತು ಇದೆ. ಒಬ್ಬರಿಗೆ ಒಂದು ಮತ ಎಂಬುದು ಈ ಪುಸ್ತಕದ ಮೂಲಭೂತ ಅಡಿಪಾಯ. ಮತದಾನ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ ಎಂದರು.
ಲೋಕಸಭಾ ಚುನಾವಣೆಯ ಬೆನ್ನಲ್ಲೇ ಮಹಾರಾಷ್ಟ್ರ ಚುನಾವಣೆಯು ನಡೆಯಿತು. ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಜಯ ಸಾಧಿಸಿದೆ. ಆದರೆ, ಕೇವಲ ನಾಲ್ಕು ಚುನಾವಣೆಯಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ಇದರ ಹಿಂದಿನ ಕಾರಣ ಪತ್ತೆ ಹಚ್ಚಿದಾಗ, ಲೋಕಸಭಾ ಚುನಾವಣೆಯಲ್ಲಿ ಒಂದು ಕೋಟಿ ಜನ ಹೊಸದಾಗಿ ಮತದಾನ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ರಾಹುಲ್ ಹೇಳಿದ್ದಾರೆ.