ರಾಜ್ಯ ಸರ್ಕಾರದಿಂದ ಧರ್ಮಸ್ಥಳ ಕಬಳಿಸಲು ಯತ್ನ: ಪ್ರತಾಪ್‌ ಸಿಂಹ

0
Spread the love

ಮೈಸೂರು: ರಾಜ್ಯ ಸರ್ಕಾರದಿಂದ ಧರ್ಮಸ್ಥಳ ಕಬಳಿಸಲು ಯತ್ನ ನಡೆದಿದೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ.

Advertisement

ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭಿಸಿದೆ ಎಂದು ಸ್ಫೋಟಕ ಆರೋಪ ಮಾಡಿದರು.

ಧರ್ಮಸ್ಥಳದಲ್ಲಿ ಸಾವಿರಾರು ಕೊಲೆಯಾಗಿದೆ ಎನ್ನುತ್ತಾರೆ. ಇದು ವಾಸ್ತವದಲ್ಲಿ ಸಾಧ್ಯವೇ? ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ? ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದು ಆರೋಪಿಸಿದರು.


Spread the love

LEAVE A REPLY

Please enter your comment!
Please enter your name here