ಬೆಳಗಾವಿ:- ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ರಸ್ತೆಯಲ್ಲಿ ನಿಂತಿದ್ದ ಕಾರು ನಜ್ಜುಗುಜ್ಜಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಸೋಮವಾರ ಪೇಟೆ ರಸ್ತೆಯಲ್ಲಿ ಜರುಗಿದೆ.
Advertisement
ಕಾರು ಪಾರ್ಕ್ ಮಾಡಿ ಹೊರ ಬರ್ತಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗೋಕಾಕ್ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಗೋಕಾಕ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.