ಚಿತ್ರದುರ್ಗ:- KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಜಿಲ್ಲೆಯ ಮಾಡನಾಯಕನಹಳ್ಳಿ ಸಮೀಪ ಜರುಗಿದೆ.
Advertisement
ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಕಡೆಯಿಂದ ಮೈಸೂರು ಕಡೆ KSRTC ಬಸ್ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲದೇ ಘಟನೆಯಲ್ಲಿ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಕಾಲು ಮುರಿದಿದೆ ಎನ್ನಲಾಗಿದೆ. ಸ್ಥಳಕ್ಕೆ ತುರುವನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.