ಚಿತ್ರದುರ್ಗ:- ಚಿತ್ರದುರ್ಗದ ಆದಿ ಜಾಂಬವ ಬಡಾವಣೆಯ ಹಳೆ ಗೃಹ ಮಂಡಳಿ ಕಚೇರಿ ಬಳಿ ಬೆಳ್ಳಂಬೆಳಗ್ಗೆ ವಾಯು ವಿಹಾರಕ್ಕೆಂದು ಹೋಗುತ್ತಿದ್ದ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಸರಗಳ್ಳರು ಎಗರಿಸಿ ಎಸ್ಕೇಪ್ ಆಗಿರುವ ಘಟನೆ ಜರುಗಿದೆ.
Advertisement
ನಿವೇದ ಎಂಬುವವರೇ ಚಿನ್ನದ ಸರ ಕಳೆದುಕೊಂಡ ಮಹಿಳೆ. ಮಹಿಳೆ ನಿವೇದ ಬೆಳಗ್ಗೆ ವಾಯು ವಿಹಾರಕ್ಕೆಂದು ಹೊರಟಿದ್ದ ಸಮಯದಲ್ಲಿ ಬೈಕ್ ನಲ್ಲಿ, ಹೆಲ್ಮೆಟ್ ಧರಿಸಿ ಬಂದಿದ್ದ ಸರಗಳ್ಳರು, ಅಡ್ರೆಸ್ ಕೇಳುವ ನೆಪದಲ್ಲಿ ಮಾತಾಡಿಸಿ, ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ವಿಷಯ ತಿಳಿದ ಬಡಾವಣೆ ಠಾಣೆ ಪೊಲೀಸರು, ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.