ನವದೆಹಲಿ:- ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.