ಬೆಂಗಳೂರು:– ಧೃವ ಸರ್ಜಾಗೆ ಬಿಗ್ ಶಾಕ್ ಎದುರಾಗಿದ್ದು, ನಟನ ವಿರುದ್ಧ 3.15 ಕೋಟಿ ವಂಚನೆ ಆರೋಪ ಕೇಳಿ ಬಂದಿದೆ.
Advertisement
ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ನಟನ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ರಾಘವೇಂದ್ರ ಹೆಗ್ಗಡೆ ಎಂಬುವವರು ನಟ ಧೃವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.