ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಲಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಜರುಗಿದೆ.
23 ವರ್ಷದ ಗೀತಾ ಸಾವಿಗೀಡಾದ ನವವಿವಾಹಿತೆ. ಗೀತಾ ಎರಡೂವರೆ ತಿಂಗಳ ಹಿಂದಷ್ಟೇ ಸುನೀಲ್ ಎಂಬವರನ್ನು ವಿವಾಹವಾಗಿದ್ದರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲೆಂದು ನಂದಿನಿ ಲೇಔಟ್ನಲ್ಲಿರುವ ನಾದಿನಿ ಮನೆಗೆ ದಂಪತಿ ಹೊರಟಿದ್ದರು. ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಡ ಸುನೀಲ್ಗೆ ಗಾಯಗಳಾಗಿವೆ. ಅಪಘಾತ ಸಂಬಂಧ ಲಾರಿ ಚಾಲಕ ಸುರೇಶ್ನನ್ನು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



