ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ 4 ನಿಲ್ದಾಣಗಳು ತಾತ್ಕಾಲಿಕ ಬಂದ್!

0
Spread the love

ಬೆಂಗಳೂರು:- ಇದು ಮೆಟ್ರೋ ಪ್ರಯಾಣಿಕರ ಗಮನಕ್ಕಾಗಿ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಸಿರು ಮಾರ್ಗದ ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಲಿದೆ.

Advertisement

ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಲಾಲ್ ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಮುಚ್ಚಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 10:30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ 3 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದು, ಇದರಲ್ಲಿ ಬೆಳಗಾವಿಯಿಂದ ಬೆಂಗಳೂರು ರೈಲು ಕೂಡ ಸೇರಿದೆ. ಬಳಿಕ 11:50 ರ ಸುಮಾರಿಗೆ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here