ದಾವಣಗೆರೆ:– ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ವ್ಯಕ್ತಿ. ಅವರ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪದ ವಿಚಾರಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿ, ಅವರು ಒಬ್ಬ ಅಪ್ರಬುದ್ಧ ವ್ಯಕ್ತಿ. ಯಾವ ಪುರುಷಾರ್ಥಕ್ಕೆ ನೀವು ಬೆಂಗಳೂರಿಗೆ ಬಂದ್ರಿ? ನೀವು ಪಲಾಯನ ವಾದಿ, ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ 138 ಸೀಟು ಗೆದ್ದಾಗ ಮತಕಳ್ಳತನ ಆಗಲಿಲ್ವಾ? ನೀವು ಚುನಾವಣಾ ಆಯೋಗಕ್ಕೆ ಮಾತ್ರವಲ್ಲ ದೇಶದ ಜನತೆಗೆ ಅಪಮಾನ ಮಾಡಿದ್ದೀರಿ. ನೀವು ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮಸ್ಥಳ ಕೇಸ್ ವಿಚಾರವಾಗಿ, ಕಾಂಗ್ರೆಸ್ ಎಡಪಂಥೀಯರ ಜೊತೆ ಸೇರಿ ಧರ್ಮಸ್ಥಳಕ್ಕೆ ಅಪಮಾನ ಮಾಡಿದೆ. ಯಾರೋ ಒಬ್ಬ ಅನಾಮಿಕ ವ್ಯಕ್ತಿಯ ಮಾತು ಕೇಳಿ ಎಸ್‍ಐಟಿ ತನಿಖೆಗೆ ಒಪ್ಪಿಸಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹರಿಹಾಯ್ದಿದ್ದಾರೆ.