ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಡಿಸಿ ಕಚೇರಿ ಆವರಣದಲ್ಲಿ ಡ್ರೈವರ್ ಬಾಬು ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುಧಾಕರ್ ಬೆಂಬಲಿಗ, ಮುನಿರಾಜು ಎಂಬಾತ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರಾದ ವಿನಯ್ ಬಂಗಾರಿ, ಹಮೀಮ್, ಸುಧಾಕರ್,
ದೀಪು, ಸಲೀಂ ವಿರುದ್ಧ ಅವಾಚ್ಯ ಶಬ್ದಗಳಿಂದ ಜಾತಿನಿಂದನೆ ಮಾಡಿದ ಆರೋಪದಡಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ ಆಟ್ರಾಸಿಟಿ ಕೇಸ್ ದಾಖಲಾಗಿದೆ.
ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ ದೂರು ದಾಖಲಾಗ್ತಿದ್ದಂತೆ ಇತ್ತ ಸಂಸದ ಸುಧಾಕರ್ ಬೆಂಬಲಿಗರ ವಿರುದ್ಧವೂ ದೂರು ದಾಖಲಿಸಲಾಗಿದೆ. ಸಂಸದ ಸುಧಾಕರ್ ಬೆಂಬಲಿಗರಾದ ನಗರಸಭೆ ಅಧ್ಯಕ್ಷ ಗಜೇಂದ್ರ ಆತನ ಸಹೋದರ ರವಿ, ಅತ್ತಿಗೆ ಶೋಭಾ ಸೇರಿ ಮುನಿರಾಜು ವಿರುದ್ಧ ದೂರು ದಾಖಲು ಮಾಡಲಾಗಿದೆ.