ಬೆಂಗಳೂರು: ಸಚಿವ ಕೆ.ಎನ್. ರಾಜಣ್ಣ ನೀಡಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಜಣ್ಣ ಅವರ ನಿರ್ಧಾರ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಲು ಸಿದ್ಧರಾಗಿದ್ದು, ಸಿಎಂ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಅಂತಿಮವಾಗಿ ರಾಜೀನಾಮೆಯನ್ನು ಅಂಗೀಕರಿಸಲಿದ್ದಾರೆ.
Advertisement
ಮಧುಗಿರಿಯ ಕಾಂಗ್ರೆಸ್ ಶಾಸಕ ಕೆಎನ್ ರಾಜಣ್ಣ ಸುದೀರ್ಘ ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾರೆ. ಕೆಎನ್ ರಾಜಣ್ಣ ಸಹಕಾರಿ ಕ್ಷೇತ್ರದಲ್ಲಿ ತಮ್ಮ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದರು. ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಕೆಎನ್ ರಾಜಣ್ಣ ಸೇವೆ ಸಲ್ಲಿಸಿದ್ದಾರೆ.