ಒಡಿಶಾ: ಒಡಿಶಾದ ಗೈಸಿಲಾತ್ ಪೊಲೀಸ್ ಠಾಣಾ ವ್ಯಾಪ್ತಿಯ ಫಿರಿಂಗ್ಮಲ್ ಗ್ರಾಮದಲ್ಲಿ 13 ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.
Advertisement
ಫುಟ್ಬಾಲ್ ಮೈದಾನದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಗ್ರಾಮಸ್ಥರು ರಕ್ಷಿಸಿ ಬರ್ಗಢ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಕೆಯ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆ ನಿರ್ಧಾರಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 8 ನೇ ತರಗತಿಯ ವಿದ್ಯಾರ್ಥಿನಿ ಪೆಟ್ರೋಲ್ ಬಳಸಿ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.