HomeGadag Newsಡಿ. ದೇವರಾಜ ಅರಸು ಜನ್ಮದಿನಾಚರಣೆ: ಪೂರ್ವಭಾವಿ ಸಭೆ

ಡಿ. ದೇವರಾಜ ಅರಸು ಜನ್ಮದಿನಾಚರಣೆ: ಪೂರ್ವಭಾವಿ ಸಭೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ದೇವರಾಜ ಅರಸು ಭವನದಲ್ಲಿ ಅದ್ದೂರಿಯಾಗಿ ಆಚರಿಸಲು ಸ್ಥಳೀಯ ತಾಲೂಕು ಆಡಳಿತ ಸೌಧದಲ್ಲಿ ತಹಸೀಲ್ದಾರ ಬಿ.ವಿ. ಗಿರೀಶಬಾಬು ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಲಾ ಕ್ಷೇತ್ರದಲ್ಲಿ ಸಾಧನೆಗೈದ ಅರಸೀಕೆರೆ ಗ್ರಾಮದ ಭಾಗವತ ಕೆ.ಬಿ. ಷಣ್ಮುಖಪ್ಪ, ಗೊಂದಳಿ ದುರುಗಪ್ಪ ಹಾಗೂ ಚಿಗಟೇರಿಯ ಮಾಳ್ಗಿ ಆನಂದಪ್ಪ ಅವರುಗಳನ್ನು ಗೌರವಿಸಲು ತೀರ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಹಾಗೂ ದೇವರಾಜ ಅರಸು ಕುರಿತು ಉಪನ್ಯಾಸ ನೀಡಲು ವಕೀಲ ಕಣವಿಹಳ್ಳಿ ಬಿ. ಮಂಜುನಾಥ ಅವರನ್ನು ಆಯ್ಕೆ ಮಾಡಲಾಯಿತು.

ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತು ಭಾಷಣ, ಚಿತ್ರಕಲೆ, ಪ್ರಬಂಧ ಸ್ಪರ್ಧೆ ಆಯೋಜಿಸಲು ಸಹ ಈ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಿದ್ದೇಶ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗರಾಜ, ಪುರಸಭಾ ಆರೋಗ್ಯ ನಿರೀಕ್ಷಕ ಮಂಜುನಾಥ, ವೈದ್ಯಾಧಿಕಾರಿ ಪೃಥ್ವಿ, ಈರಣ್ಣ, ವಿವಿಧ ಸಂಘಟನೆಗಳ ಮುಖಂಡರಾದ ಗುಡಿಹಳ್ಳಿ ಹಾಲೇಶ, ಸಣ್ಣ ಅಜ್ಜಯ್ಯ, ಭೀಮಪ್ಪ, ಪುರಸಭಾ ನಾಮನಿರ್ದೆಶಿತ ಸದಸ್ಯ ಹೇಮಣ್ಣ ಮೋರಗೇರಿ, ಅರಸೀಕೆರೆಯ ಗೋಪಾಲ ಗೊಂದಲಿ, ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ಭೀಮಪ್ಪ, ಮೇಲ್ವಿಚಾರಕ ಬಿ.ಎಚ್. ಚಂದ್ರಪ್ಪ ಮುಂತಾದವರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img