ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆದಿದೆ. ಇದೇ ವೇಳೆ 64ನೇ ಸೆಷನ್ಸ್ ಕೋರ್ಟ್ ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು.
Advertisement
ಕಳೆದ ಬಾರಿಯ ವಿಚಾರಣೆ ವೇಳೆ ಕೆಲವು ಆರೋಪಿಗಳು ಗೈರಾಗಿದ್ದರು. ಇದೇ ವೇಳೆ 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದರು. ಚಾರ್ಜ್ ಪ್ರೇಮ್ ಸಲುವಾಗಿ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ.
ಚಾರ್ಜ್ ಪ್ರೇಮ್ ಎಂದರೆ ದೋಷಾರೋಪ ಹೊರಿಸುವುದು. ಯಾವ ಯಾವ ಸೆಕ್ಷನ್ಗಳಡಿ ಆರೋಪ ಇದೆ ಎಂದು ಕೋರ್ಟ್ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್ಗಳ ಬಗ್ಗೆ ಕೋರ್ಟ್ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.