ವಿಜಯಸಾಕ್ಷಿ ಸುದ್ದಿ, ಧಾರವಾಡ
ಹಲವಾರು ಗೊಂದಲಗಳಿಗೆ ಕಾರಣವಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸುವ ಬಗೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಕೃತವಾಗ ಧಾರವಾಡ ಜಿಲ್ಲೆಯನ್ನು ಅನ್ ಲಾಕ್ ಮಾಡಿ ಆದೇಶ ನೀಡಿದ್ದಾರೆ.
ಆರೋಗ್ಯ ಇಲಾಖೆ ಮತ್ತು ವಾರ್ ರೂಮ್ ನ ಸಮನ್ವಯದ ಕೊರತೆಯಿಂದ ಧಾರವಾಡ ಜಿಲ್ಲೆ ಅನ್ ಲಾಕ್ ನಿಂದ ಹೊರಗೆ ಉಳಿದಿತ್ತು. ಹೀಗಾಗಿ ಇಂದು ಜಿಲ್ಲಾ ಉಸ್ತವಾರಿ ಜಗದೇಶ್ ಶೆಟ್ಟರ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆಯಲ್ಲಿ ಮಾತನಾಡಿ ಧಾರವಾಡ ಜಿಲ್ಲೆಯಲ್ಲಿ ಅನ್ ಲಾಕ್ ಆದೇಶ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮಾತನಾಡಿದ ಅವರು ಇದರಲ್ಲಿ ಜಿಲ್ಲಾಡಳಿತದಿಂದ ಯಾವುದೇ ತಪ್ಪಾಗಿಲ್ಲ, ಧಾರವಾಡ ಅನ್ ಲಾಕ್ ಆಗದಿದ್ದರೆ ಆರ್ಥಿಕ ಚಟುವಟಿಕೆಗೆ ಹೊಡೆತ ಬೀಳಲಿದೆ. ಮುಖ್ಯಮಂತ್ರಿಗಳು, ಕಾಯದರ್ಶಿ ಹಾಗೂ ಸಚಿವ ಸುಧಾಕರ್ ಜೊತೆಗೆ ಮಾತನಾಡಿದ್ದೇನೆ. ಹೀಗಾಗಿ ಸರ್ಕಾರ ಅನ್ ಲಾಕ್ ಮಾಡಿ ಆದೇಶ ನೀಡಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಅವಕಾಶ ಇದೆ. ಹೋಟೆಲ್‌ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಇನ್ನೂ ಯಾವ್ಯಾವುದಕ್ಕೆ ಅವಕಾಶ ನೀಡಲಾಗುತ್ತದೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗಿದೆ.