ಬೆಂಗಳೂರು| ಹೊತ್ತಿ ಉರಿದ ಶಾಲಾ ವಾಹನ – ಬೆಂಕಿ ಅವಘಡದಲ್ಲಿ ವ್ಯಕ್ತಿ ಸಜೀವ ದಹನ!

0
Spread the love

ಬೆಂಗಳೂರು:- ನಿಂತಿದ್ದ ಶಾಲಾ ವಾಹನವೊಂದು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿರುವ ಘಟನೆ ನಗರದ ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿ ಜರುಗಿದೆ.

Advertisement

ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ‌ ನಂದಿಸಿದ್ದಾರೆ. ಬಸ್ಸಿನ ಒಳಗೆ ಒಬ್ಬರು ಸಜೀವ ದಹನವಾಗಿದ್ದಾರೆ ಎಂದು ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಮಾಹಿತಿ ನೀಡಿದೆ. OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಈ ದುರಂತ ಸಂಭವಿಸಿದೆ. ಬಸ್‌ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ‌ಯಾಗಿದೆ. ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರುಣ್ ಎಂಬವರಿಗೆ ಸೇರಿದ ಖಾಸಗಿ ಶಾಲೆ ಬಸ್ ಇದಾಗಿದೆ. ಘಟನೆಯಲ್ಲಿ ಮೃತ ವ್ಯಕ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಪೊಲೀಸರು ಯುಡಿಆರ್‌ ದಾಖಲಿಸಿಕೊಂಡಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಖಾಸಗಿ ಬಸ್‌ನಲ್ಲಿ ಚಾಪೆ, ದಿಂಬು ತಂದು ವ್ಯಕ್ತಿ ಮಲಗಿದ್ದ ಎಂಬುದು ಪರಿಶೀಲನೆಯಿಂದ ಗೊತ್ತಾಗಿದೆ. ಸುಮಾರು ಮೂರು ತಿಂಗಳಿನಿಂದ ಶಾಲಾ ಬಸ್‌ ಕೆಟ್ಟು ನಿಂತಿತ್ತು. 14 ವರ್ಷದ ಹಳೆ ಬಸ್‌ಗೆ ಎಫ್‌ಸಿ, ಇನ್ಯೂರೆನ್ಸ್ ಮುಗಿದಿತ್ತು. ಹೀಗಾಗಿ, OMBR ಲೇಔಟ್ ರಸ್ತೆಯಲ್ಲಿ ಮಾಲೀಕ ಅರುಣ್ ಬಸ್ ನಿಲ್ಲಿಸಿದ್ದರು. ನಿನ್ನೆ ಸಂಜೆ ಕೂಡ ಬಸ್ ಬಳಿ ಬಂದು ನೋಡಿಕೊಂಡು ಹೋಗಿದ್ದರು.

ಬಸ್‌ಗೆ ಸರಿಯಾಗಿ ಡೋರ್ ಲಾಕ್ ಆಗಿರಲಿಲ್ಲ. ಹೀಗಾಗಿ, ಬಸ್‌ನ ಒಳಗೆ ಹೋಗಿ ವ್ಯಕ್ತಿ ಧೂಮಪಾನ ಮಾಡಿ ಮಲಗಿದ್ದ. ಬಸ್‌ನಲ್ಲಿ ಕೆಲ ಬೀಡಿ ತುಂಡುಗಳು ಪತ್ತೆಯಾಗಿದೆ ಎನ್ನಲಾಗಿದೆ. ಬೀಡಿ ಸೇದಿದ ತುಂಡಿನಿಂದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ಯಾ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here