ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅನಧಿಕೃತವಾಗಿ ಹೂತಿರುವ ಆರೋಪದಡಿಯಲ್ಲಿ ನಡೆಯುತ್ತಿರುವ ವಿಶೇಷ ತನಿಖಾ ತಂಡದ ಕಾರ್ಯಾಚರಣೆಯು ರಾಜ್ಯಾದ್ಯಂತ ಗಮನ ಸೆಳೆದಿದೆ. ಇನ್ನೂ 16 ಪಾಯಿಂಟ್ಗಳಲ್ಲಿ ಉತ್ಖನನ ನಡೆಸಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಚಿಂತನೆ ನಡೆಸುತ್ತಿದೆ.ಮಂಪರು ಪರೀಕ್ಷೆಗೆ ಕೋರ್ಟ್ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತು ಎಸ್ಐಟಿ ಚಿಂತನೆ ನಡೆಸಿದ್ದು, ತನಿಖೆಯ ಮುಂದುವರಿದ ಹಂತದಲ್ಲಿ ಈ ಕ್ರಮ ಅಗತ್ಯವೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ಖನನ ವೈಫಲ್ಯದ ಜೊತೆ ಇತರೆ ತನಿಖೆಗಳ ಆಧಾರದಲ್ಲಿ ಅರ್ಜಿ ಸಲ್ಲಿಕೆಗೆ ಚಿಂತನೆ ನಡೆದಿದೆ. ದೂರುದಾರನ ಪ್ರಾರಂಭಿಕ ಹೇಳಿಕೆ ಹಾಗೂ ನಂತರ ನೀಡಿದ ಹೇಳಿಕೆಗಳಲ್ಲಿ ಗೊಂದಲವಿದೆಯಾ ಎಂದು ಪರಿಶೀಲನೆಗೆ ಮುಂದಾಗಿದೆ. ಜಾಗಗಳ ಸ್ಥಳ ವಿವರಣೆಗಳಲ್ಲಿ ಸಮಯ, ದಿನಾಂಕ ಮತ್ತು ಭಾಗವಹಿಸಿದವರ ಹೆಸರುಗಳಲ್ಲಿ ಗೊಂದಲವಿದೆಯಾ ಎಂದು ಪರಿಶೀಲಿಸಲಿದೆ.
ತನಿಖೆಯಲ್ಲಿ ದೊರೆತ ತಾಂತ್ರಿಕ ಮಾಹಿತಿ, ದಾಖಲೆಗಳು, ದೂರುದಾರ ನೀಡಿದ ಮೌಖಿಕ ಹೇಳಿಕೆಗಳ ನಡುವೆ ಹೊಂದಾಣಿಕೆ ಇಲ್ಲದಿದ್ದರೆ ಅರ್ಜಿ ಸಲ್ಲಿಸಲಿದೆ. ಗೊಂದಲವಿದ್ದರೆ ತನಿಖೆಗೆ ಅಗತ್ಯವಾದ ನಿಖರ ಮಾಹಿತಿಯನ್ನು ಪಡೆಯಲು ಮಂಪರು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.