ತಪ್ಪಿದ ಚಾಲಕನ ನಿಯಂತ್ರಣ: ವರದಾ ನದಿಗೆ ಬಿದ್ದ ಟ್ರ್ಯಾಕ್ಟರ್, ಕ್ರೇನ್ ಮೂಲಕ ತೆರವು!

0
Spread the love

ಹಾವೇರಿ :- ತಾಲೂಕಿನ ಮರಡೂರು ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವರದಾ ನದಿಗೆ ಬಿದ್ದಿದ್ದ ಟ್ರ್ಯಾಕ್ಟರನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯ ಮಾಡಲಾಗಿದೆ.

Advertisement

ಈಜುತಜ್ಞರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದಿಂದ ಟ್ರ್ಯಾಕ್ಟರ್ ಮೇಲೆತ್ತುವ ಕಾರ್ಯ ನಡೆದಿದೆ. ಗ್ರಾಮದ ಸುರೇಶ ದೊಡ್ಡಗೌಡರ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಜಮೀನಿನಿಂದ ಮೆಣಸಿನಕಾಯಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿತ್ತು. ಟ್ರ್ಯಾಕ್ಟರ್‌ನಲ್ಲಿದ್ದ ಮೂವರನ್ನ ಸ್ಥಳೀಯರು ರಕ್ಷಣೆ ಮಾಡಿದ್ದರು.

ಇದೀಗ ಸತತ 5 ಗಂಟೆಗಳ ಕಾರ್ಯಚರಣೆ ನಡೆಸಿ ಟ್ರ್ಯಾಕ್ಟರ್ ಮೇಲೆತ್ತಲಾಗಿದೆ. ವರದಾ ನದಿಗೆ ಇರುವ ಬ್ರಿಜ್ಡ್ ಕಂ ಬ್ಯಾರೇಜ್‌ಗೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here