ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದ್ದು, ಮಳೆಯೊಂದಿಗೆ ಚುಮುಚುಮು ಚಳಿ ಅನುಭವವಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಇದೇ ವೇಳೆ, ಗಂಟೆಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.