ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಪ್ರತಿಕ್ರಿಯೇ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ತೀರ್ಪು ಏನಾಗುತ್ತೋ ಎಂಬ ಆತಂಕ ಇತ್ತು. ಜಾಮೀನು ರದ್ದಿನಿಂದ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಪುತ್ರನ ನೆನೆದು ಕಣ್ಣೀರಿಟ್ಟಿದ್ದಾರೆ.
ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸುಪ್ರಿಂ ಕೋರ್ಟ್‌ನಿಂದ ನ್ಯಾಯ ಸಾಭೀತಾಗಿದೆ. ಮಗನ ಕಳೆದುಕೊಂಡು ಆತಂಕದಲ್ಲಿದ್ದೆವು. ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ. ಸರ್ಕಾರ, ನ್ಯಾಯಾಂಗವನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ದಾರೆ.