ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇದರ ಬೆನ್ನಲ್ಲೇ ಬೆಂಗಳೂರಿನ ಆರ್‌ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿದ್ದರು. ಜೊತೆಗೆ ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದರು.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಕೂಡ ಹಂಚಿಕೊಂಡಿದ್ದರು. ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.