ವಿಜಯಸಾಕ್ಷಿ ಸುದ್ದಿ, ಗದಗ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಗದಗ, ಗದಗ-ಬೆಟಗೇರಿ ನಗರಸಭೆ ಇವರುಗಳ ಸಹಯೋಗದಲ್ಲಿ ಗದಗ-ಬೆಟಗೇರಿ ನಗರದ ಹಳೇ ಬಸ್‌ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಆಗಸ್ಟ್ 15ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್, ನಗರಾಭಿವೃದ್ಧಿ ಸಚಿವರಾದ ಸುರೇಶ ಬಿ.ಎಸ್. (ಬೈರತಿ) ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದರಾದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಆಗಮಿಸುವರು.
ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಹಾಗೂ ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎ. ಬಂಡಿವಡ್ಡರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ರಾಜೇಂದ್ರ ಚೋಳನ್, ಯೋಜನೆ, ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ರಮಣದೀಪ್ ಚೌಧರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ , ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರು ಆಗಮಿಸುವರು.