ಬೆಂಗಳೂರು: ಇಂದು ದೇಶದೆಲ್ಲೆಡೆ 79 ನೇ ಸ್ವಾತಂತ್ರ ದಿನಾಚರಣೆಯ ಸಂಭ್ರಮ ಮನೆಮಾಡಿದೆ.
ಅದರಂತೆ ಪ್ರತಿವರ್ಷದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದ್ದು, ನಟ ದರ್ಶನ್ ಮತ್ತು ಪ್ರಜ್ವಲ್ ರೇವಣ್ಣ ಗೈರಾಗಿದ್ದಾರೆ. ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿಗೂ ಸಮಾರಂಭ ಮಾಡಲಾಯಿತು. ಆದರೆ, ದರ್ಶನ್ ಮತ್ತು ಪ್ರಜ್ವಲ್ ರೇವಣ್ಣ ಭಾಗಿಯಾಗಿಲ್ಲ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತೆ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಕೂಡ ಜೈಲು ಸೇರಿದ್ದಾರೆ. ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನಟ ದರ್ಶನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ, ಸ್ವಾತಂತ್ರ್ಯೋತ್ಸವಕ್ಕೆ ಗೈರಾಗಿದ್ದಾರೆ. ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಜೈಲಲ್ಲಿದ್ದಾರೆ. ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ.
ಒಟ್ಟಾರೆ 200 ವರ್ಷಗಳಷ್ಟು ಹೆಚ್ಚು ಕಾಲ ಭಾರತವನ್ನು ಆಳಿದ ಬ್ರಿಟಿಷರ ದಾಸ್ಯದಿಂದ ಮುಕ್ತವಾದ ದಿನ ಆಗಸ್ಟ್ 15. ಹೀಗಾಗಿ ಭಾರತೀಯರಿಗೆ ಸ್ವಾತಂತ್ರ್ಯ ದಿನ ಮರೆಯಲಾಗದ ದಿನವಾಗಿದ್ದು, ದೇಶದಾದಂತ್ಯ ಹಬ್ಬದಂತೆ ಆಚರಿಸುತ್ತಾರೆ.