ನೆಲಮಂಗಲ: ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತ ದುರ್ಧೈವಿಗಳಾಗಿದ್ದು,
Advertisement
ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು.
ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.