ನಟ ಅಜಯ್ ರಾವ್ ವಿರುದ್ಧ ದೂರು ಕೊಟ್ಟ ಪತ್ನಿ ಸಪ್ನಾ: ಸಂಸಾರದಲ್ಲಿ ಬಿರುಕು?

0
Spread the love

ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ.

Advertisement

ಅಜಯ್ ರಾವ್ ಹಾಗೂ ಸಪ್ನಾ ಅವರುಗಳು ಪ್ರೀತಿಸಿ ಮದುವೆ ಆಗಿದ್ದರು. 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು.

ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. 2019 ರಲ್ಲಿ ಮಗಳ ಜನನ ಆಗಿತ್ತು. ಇದೀಗ ಅಜಯ್ ರಾವ್ ಪತ್ನಿ ಸಪ್ನಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here