ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಈ ಪ್ರಕರಣದಲ್ಲಿ ಪತಿಯನ್ನು ಹೇಗಾದರು ಮಾಡಿ ಹೊರ ತರಬೇಕು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಜೊತೆಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಹರಕೆ ತೀರಿಸಿದ್ದರು. ಆದ್ರೆ ಇದೀಗ ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಮೊದಲ ಭಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ವಿಜಯಲಕ್ಷ್ಮೀ ಮನಸ್ಸು ಒಡೆದಿದೆ ಎಂದು ಹೇಳಿಕೊಂಡಿದ್ದಾರೆ. ವಿಜಯಲಕ್ಷ್ಮೀ ಹಂಚಿಕೊಂಡಿರುವ ಪೋಸ್ಟ್ ನಲ್ಲಿ ದರ್ಶನ್ ಬ್ಯಾಕ್ ಪೋಸ್ನ ಫೋಟೋ ಹಾಕಿದ್ದಾರೆ. ದರ್ಶನ್ ಸರಳಿನ ಹಿಂದೆ ನಿಂತು ಏನನ್ನೋ ನೋಡುತ್ತಿದ್ದಾರೆ. ಈ ಪೋಸ್ಟ್ಗೆ ಅವರು ಒಡೆದ ಹೃದಯದ ಎಮೋಜಿ ಹಾಕಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಎರಡು ದಿನಗಳ ಹಿಂದಷ್ಟೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿತ್ತು. ಈ ಬೆನ್ನಲ್ಲೇ ಐವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.