ಬೆಂಗಳೂರು:- ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ ಇದೆ ಎಂದು ಸಿಟಿ ರವಿ ಹೇಳಿದ್ದಾರೆ.
Advertisement
ಮಂಜುನಾಥನ ದರ್ಶನ ಪಡೆದು ಮಾತನಾಡಿದ ಸಿಟಿ ರವಿ, ಬಿಜೆಪಿ ತನಿಖೆಯನ್ನ ಪ್ರಶ್ನಿಸುವುದಿಲ್ಲ. ತನಿಖೆಗೆ ಮುಂಚೆಯೇ ಅಪರಾಧಿ ಸ್ಥಾನ ಕೊಟ್ಟಿದ್ದಾರೆ. ಈ ಷಡ್ಯಂತರ ಹಿಂದೆ ಮತಾಂಧತೆ ಇದೆ. ಇದರ ಹಿಂದೆ ಮತಾಂತರ ಮಾಫಿಯಾ ಇದೆ. ಲಾಭ ಪಡೆಯುವ ಹುನ್ನಾರವು ಸೇರಿದೆ. ನ್ಯಾಯ ಕೊಡಿಸುವ ನೆಪದಲ್ಲಿ ಧರ್ಮಸ್ಥಳವನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇದರ ಹಿಂದೆ ಇರುವವರ ವಿರುದ್ಧ ಸಿಎಂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡಿದವರ ವಿರುದ್ಧ ತನಿಖೆ ಅಗಬೇಕು. ಡಿ.ಕೆ ಶಿವಕುಮಾರ್ ಅವರೇ ಇದರ ಹಿಂದೆ ಷಡ್ಯಂತ್ರ ನಡೀತಿದೆ ಎಂದು ಹೇಳಿದ್ದಾರೆ. ಷಡ್ಯಂತ್ರ ಯಾರು ಮಾಡ್ತಿದ್ದಾರೆ? ಈ ವಿಚಾರವನ್ನು ಬಹಿರಂಗಪಡಿಸಬೇಕು. ಈಗ ಸತ್ಯ ಹೇಳುವುದಕ್ಕೆ ಸೂಕ್ತ ಕಾಲ ಎಂದು ಒತ್ತಾಯಿಸಿದರು.