ಬೆಂಗಳೂರು:- ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇವಲ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಕೆಲವೆಡೆ ಕೂಡ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಕೂಡ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.