ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ :
ಇಂದು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ದಿನವನ್ನು ಮುಂದಿನ ಶನಿವಾರ ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ, ಸರಿದೂಗಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ, ಐಟಿಐ ಕಾಲೇಜು ರಜೆ ಘೋಷಿಸಲಾಗಿದೆ.